2 Kings 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ’ ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.
Kannada BSI Bible 2016
ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು.
Kannada Bible (KNCL) BSI 2016
ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.