2 Kings 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.
Kannada BSI Bible 2016
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರು ಒಂದು ಸಾರಿ ಸುಲಿಗೆಮಾಡುವದಕ್ಕೋಸ್ಕರ ಇಸ್ರಾಯೇಲ್ಯರ ಪ್ರಾಂತಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು; ಆಕೆಯು ನಾಮಾನನ ಹೆಂಡತಿಗೆ ದಾಸಿಯಾದಳು.
Kannada Bible (KNCL) BSI 2016
ಸಿರಿಯಾದವರು, ಒಮ್ಮೆ ಸುಲಿಗೆಗಾಗಿ ಇಸ್ರಯೇಲರ ಪ್ರಾಂತ್ಯಕ್ಕೆ ಹೋಗಿಬರುವಾಗ, ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು. ಆಕೆ ನಾಮಾನನ ಹೆಂಡತಿಗೆ ದಾಸಿಯಾದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.