2 Kings 5:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
Kannada BSI Bible 2016
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.
Kannada Bible (KNCL) BSI 2016
ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.