2 Kings 5:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಮಾನನು, “ದಯಮಾಡಿ ಎಪ್ಪತ್ತು ಕಿಲೋಗ್ರಾಂ ತೆಗೆದುಕೊ!” ಎಂದು ಗೇಹಜಿಗೆ ಒತ್ತಾಯಪಡಿಸಿ ಎಪ್ಪತ್ತು ಕಿಲೋಗ್ರಾಂ ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಹಾಕಿದನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ತನ್ನ ಸೇವಕರಿಗೆ ಕೊಟ್ಟನು. ಆ ಸೇವಕರು ಈ ವಸ್ತುಗಳನ್ನು ತೆಗೆದುಕೊಂಡು ಗೇಹಜಿಯೊಡನೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.
Kannada BSI Bible 2016
ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಮಾನನು - ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೇ ಎಂದು ಅವನನ್ನು ಒತ್ತಾಯಪಡಿಸಿ ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ ಆ ಚೀಲಗಳನ್ನೂ ಎರಡು ದುಸ್ತುಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.
Kannada Bible (KNCL) BSI 2016
ನಾಮಾನನು, “ಆರು ಸಾವಿರ ನಾಣ್ಯವನ್ನಾದರೂ ತೆಗೆದುಕೊಳ್ಳಬಾರದೇ,” ಎಂದು ಅವನನ್ನು ಒತ್ತಾಯಪಡಿಸಿ, ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ, ಆ ಚೀಲಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ, ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು.