2 Kings 5:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.