2 Kings 5:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನು ಗೇಹಜಿಗೆ, “ಅದು ನಿಜವಲ್ಲ! ನಾಮಾನನು ನಿನ್ನನ್ನು ಸಂಧಿಸಲು ತನ್ನ ರಥದಿಂದ ಹಿಂದಕ್ಕೆ ತಿರುಗಿದಾಗ ನನ್ನ ಹೃದಯವು ನಿನ್ನ ಹತ್ತಿರದಲ್ಲಿಯೇ ಇತ್ತು. ಹಣವನ್ನು, ಬಟ್ಟೆಗಳನ್ನು, ಆಲೀವನ್ನು, ದ್ರಾಕ್ಷಿಯನ್ನು, ಕುರಿಗಳನ್ನು, ಹಸುಗಳನ್ನು ಅಥವಾ ಸೇವಕಸೇವಕಿಯರನ್ನು ತೆಗೆದುಕೊಳ್ಳುವ ಕಾಲ ಇದಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?
Kannada BSI Bible 2016
ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?
Kannada Bible (KNCL) BSI 2016
ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?