2 Kings 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಾಮ್ಯರ ರಾಜನು, “ಎಲೀಷನನ್ನು ಕಂಡುಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು. ಸೇವಕರು ಅರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು.
Kannada BSI Bible 2016
ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಇದನ್ನು ಕೇಳಿ - ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಸುತ್ತೇನೆ ಎಂದು ಹೇಳಿದನು. ಪ್ರವಾದಿಯು ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು
Kannada Bible (KNCL) BSI 2016
ಅರಸನು ಇದನ್ನು ಕೇಳಿ, “ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಯುತ್ತೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.