2 Kings 6:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
Kannada BSI Bible 2016
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು.
Kannada Bible (KNCL) BSI 2016
ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.