2 Kings 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.
Kannada BSI Bible 2016
ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು.
Kannada Bible (KNCL) BSI 2016
ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.