2 Kings 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು.
Kannada BSI Bible 2016
ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾವು ಯೊರ್ದನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು ನಮಗೋಸ್ಕರ ಒಂದು ಮನೆಯನ್ನು ಮಾಡಿಕೊಳ್ಳೋಣ ಅಂದರು; ಅವನು ಅವರಿಗೆ ಹೋಗಬಹುದು ಎಂದು ಹೇಳಲು ಅವರಲ್ಲೊಬ್ಬನು -
Kannada Bible (KNCL) BSI 2016
ಆದುದರಿಂದ ನಾವು ಜೋರ್ಡನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ದಿಮ್ಮಿಯನ್ನು ಕಡಿದುಕೊಂಡು ಬಂದು ನಮಗೆ ಇರಲು ಒಂದು ಮನೆಯನ್ನು ಕಟ್ಟಿಕೊಳ್ಳೋಣ,” ಎಂದರು. ಅವನು ಅವರಿಗೆ, “ಹೋಗಬಹುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು.