2 Kings 6:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಸಮಾರ್ಯಕ್ಕೆ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಈ ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು. ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಅರಾಮ್ಯರ ಸೇನೆಗೆ ತಾವು ಸಮಾರ್ಯ ನಗರದಲ್ಲಿರುವುದು ತಿಳಿದುಬಂತು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
Kannada BSI Bible 2016
ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಮಾರ್ಯದೊಳಗೆ ಬಂದಾಗ ಎಲೀಷನು - ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ ಎಂದು ಯೆಹೋವನನ್ನು ಬೇಡಿಕೊಂಡದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
Kannada Bible (KNCL) BSI 2016
ಅವರು ಸಮಾರಿಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದು ಸರ್ವೇಶ್ವರನನ್ನು ಬೇಡಿಕೊಂಡನು. ಅಂತೆಯೇ ಸರ್ವೇಶ್ವರ ಅವರ ಕಣ್ಣುಗಳನ್ನು ತೆರೆದರು. ಆಗ ಅವರಿಗೆ ತಾವು ಸಮಾರಿಯದಲ್ಲಿದ್ದೇವೆಂದು ತಿಳಿದುಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು.