2 Kings 6:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.
Kannada BSI Bible 2016
ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವಿಯೋ? ಇವರಿಗೆ ಅನ್ನಪಾನಗಳನ್ನು ಕೊಡು; ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅವನು, “ಬೇಡ; ನೀನು ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ಕತ್ತಿಬಿಲ್ಲುಗಳಿಂದ ಸಂಹರಿಸುವೆಯೋ? ಅವರಿಗೆ ಅನ್ನಪಾನಗಳನ್ನು ಕೊಡು; ಉಂಡುಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಸಂಹರಿಸಬೇಡ. ನೀನು ನಿನ್ನ ಖಡ್ಗದಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳದವರನ್ನು ಹೊಡೆಯುತ್ತೀಯೋ? ರೊಟ್ಟಿಯನ್ನೂ, ನೀರನ್ನೂ ಇವರ ಮುಂದೆ ಇಡು. ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ,” ಎಂದನು.