2 Kings 6:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
Kannada BSI Bible 2016
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
Kannada Bible (KNCL) BSI 2016
ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.