2 Kings 6:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.
Kannada BSI Bible 2016
ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ಇಸ್ರಾಯೇಲ್ಯರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ ಒಬ್ಬ ಸ್ತ್ರೀಯು - ಅರಸೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು ಎಂದು ಮೊರೆಯಿಟ್ಟಳು.
Kannada Bible (KNCL) BSI 2016
ಒಂದು ದಿನ ಇಸ್ರಯೇಲರ ಅರಸನು ಕೋಟೆಯ ಮೇಲೆ ತಿರುಗಾಡುತ್ತಿರುವಾಗ ಒಬ್ಬ ಮಹಿಳೆ, “ಅರಸರೇ, ನಮ್ಮ ಒಡೆಯರೇ, ನನ್ನನ್ನು ಕಾಪಾಡಿ,” ಎಂದು ಮೊರೆಯಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು.