2 Kings 6:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನನ್ನ ಮಗನನ್ನು ಬೇಯಿಸಿ, ನಾವು ತಿಂದು ಬಿಟ್ಟೆವು. ಮಾರನೆಯ ದಿನ ನಾನು ಈ ಸ್ತ್ರೀಗೆ, ‘ನಿನ್ನ ಮಗನನ್ನು ನಾವು ಕೊಂದು ತಿನ್ನೋಣ’ ಎಂದು ಹೇಳಿದೆನು. ಆದರೆ ಅವಳು ತನ್ನ ಮಗನನ್ನು ಅಡಗಿಸಿಟ್ಟಿದ್ದಾಳೆ!” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.
Kannada BSI Bible 2016
ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು. ಮರುದಿವಸ ನಾನು ಈಕೆಗೆ - ಈಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ ಅಂದಾಗ ಈಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು ಎಂದು ಹೇಳಿದಳು.
Kannada Bible (KNCL) BSI 2016
ಮರುದಿನ ನಾನು ಈಕೆಗೆ, ‘ಈ ದಿನ ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ,’ ಎಂದಾಗ ಈಕೆ ಅವನನ್ನು ಎಲ್ಲಿಯೋ ಅಡಗಿಸಿಬಿಟ್ಟಳು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ನಾವು ನನ್ನ ಮಗನನ್ನು ಬೇಯಿಸಿ ಅವನನ್ನು ತಿಂದೆವು. ಮಾರನೆಯ ದಿವಸದಲ್ಲಿ ನಾನು ಅವಳಿಗೆ, ‘ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು,’ ಎಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ,” ಎಂದಳು.