2 Kings 6:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.
Kannada BSI Bible 2016
ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣೀತಟ್ಟು ಇರುವದು ಜನರಿಗೆ ಕಂಡಿತು.
Kannada Bible (KNCL) BSI 2016
ಕೋಣೆಯ ಮೇಲೆ ತಿರುಗಾಡುತ್ತಿದ್ದ ಅರಸನು ಆ ಮಹಿಳೆಯ ಮಾತನ್ನು ಕೇಳಿದೊಡನೆ ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು.