2 Kings 6:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.
Kannada BSI Bible 2016
ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.
Kannada Bible (KNCL) BSI 2016
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.