2 Kings 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಆ ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಆ ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.
Kannada BSI Bible 2016
ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನ ಕೊಡಲಿಯು ಕಾವು ತಪ್ಪಿ ನೀರೊಳಗೆ ಬಿದ್ದಿತು. ಆದದರಿಂದ ಅವನು - ಅಯ್ಯೋ, ಸ್ವಾಮೀ, ನಾನು ಅದನ್ನು ಎರವಾಗಿ ತಂದಿದ್ದೆನು ಎಂದು ಕೂಗಿದನು.
Kannada Bible (KNCL) BSI 2016
ಆದುದರಿಂದ ಅವನು, “ಅಯ್ಯೋ! ಗುರುವೇ, ನಾನು ಅದನ್ನು ಸಾಲವಾಗಿ ತಂದಿದ್ದೆ,” ಎಂದು ಸಂತಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.