2 Kings 6:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರ ರಾಜನು ಇಸ್ರೇಲಿನ ವಿರುದ್ಧ ಯುದ್ಧಮಾಡಲು ಬಂದನು. ಅವನು ತನ್ನ ಸೇನಾಧಿಕಾರಿಗಳ ಸಭೆಸೇರಿಸಿ, “ನೀವು ಈ ಜಾಗದಲ್ಲಿ ಅಡಗಿಕೊಂಡಿದ್ದು, ಇಸ್ರೇಲರು ಇಲ್ಲಿಗೆ ಬಂದಾಗ ಅವರ ಮೇಲೆ ಆಕ್ರಮಣ ಮಾಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.
Kannada BSI Bible 2016
ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಅರಸನು ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತು ಮಾಡುವಷ್ಟು ಸಾರಿ
Kannada Bible (KNCL) BSI 2016
ಸಿರಿಯಾದ ರಾಜನು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತುಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.