2 Kings 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೆದ್ದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾಡಬೇಕೆಂದಿರುವುದನ್ನು ನಾನು ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.
Kannada BSI Bible 2016
ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ - ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆಂಬದನ್ನು ಅವರು ಬಲ್ಲರು. ಆದದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ ಅಂದನು.
Kannada Bible (KNCL) BSI 2016
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಸಿರಿಯಾದವರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟುಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ. ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದ್ದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೇ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ.”