2 Kings 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೂಡಲೇ ರಾಜನು ಎರಡು ರಥಗಳನ್ನು ತರಿಸಿ ಅರಾಮ್ಯರ ಸೇನೆಯು ಎಲ್ಲಿದೆ ಎಂಬುದನ್ನು ನೋಡಿಕೊಂಡು ಬರುವುದಕ್ಕಾಗಿ ಅವರನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
Kannada BSI Bible 2016
ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ ಅರಾಮ್ಯರ ಸೈನ್ಯವೆಲ್ಲಿರುತ್ತದೆಂಬದನ್ನು ನೋಡಿ ಬರುವದಕ್ಕಾಗಿ ರಾಹುತರನ್ನು ಕಳುಹಿಸಿದನು.
Kannada Bible (KNCL) BSI 2016
ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಸಿರಿಯಾದವರ ಸೈನ್ಯವೆಲ್ಲಿರುತ್ತದೆಂಬುದನ್ನು ನೋಡಿಬರುವುದಕ್ಕಾಗಿ, ರಾಹುತರನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವರು ಎರಡು ಜೋಡಿ ಕುದುರೆಗಳೊಂದಿಗೆ ಎರಡು ರಥಗಳನ್ನು ಆರಿಸಿಕೊಂಡರು ಮತ್ತು ಅರಸನು ಅರಾಮ್ಯರ ಸೈನ್ಯದ ಹಿಂದೆ ಅವರನ್ನು ಕಳುಹಿಸಿ, “ಹೋಗಿ ಏನಾಯಿತು ಎಂದು ತಿಳಿದುಕೊಳ್ಳಿ” ಎಂದು ಅವನು ರಾಹುತರಿಗೆ ಆಜ್ಞಾಪಿಸಿದನು.