2 Kings 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
Kannada BSI Bible 2016
ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೊರ್ದನ್‍ಹೊಳೆಯವರೆಗೂ ಹೋಗಿ ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನೂ ಸಾಮಾನುಗಳನ್ನೂ ಬಿಸಾಡಿದ್ದನ್ನು ಕಂಡು ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
Kannada Bible (KNCL) BSI 2016
ಅವರು ಜೋರ್ಡನ್ ನದಿಯವರೆಗೂ ಹೋಗಿ, ದಾರಿಯಲ್ಲೆಲ್ಲಾ ತಮ್ಮ ಬಟ್ಟೆಬರೆಗಳನ್ನೂ ಸಾಮಾನು ಸರಂಜಾಮುಗಳನ್ನೂ ಬಿಸಾಡಿರುವುದನ್ನು ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.