2 Kings 7:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ತನಗೆ ಆಪ್ತನಾಗಿದ್ದ ಅಧಿಕಾರಿಯನ್ನು ಪಟ್ಟಣದ ಬಾಗಿಲನ್ನು ಕಾಯಲು ಆರಿಸಿಕೊಂಡನು. ಆದರೆ ಜನರು ಶತ್ರುಗಳ ಪಾಳೆಯದಲ್ಲಿದ್ದ ಆಹಾರವನ್ನು ಪಡೆಯಲು ಓಡಿಹೋಗುವಾಗ ಅವನು ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು. ರಾಜನು ಎಲೀಷನ ಮನೆಗೆ ಬಂದಿದ್ದಾಗ, ದೇವಮನುಷ್ಯನು ಹೇಳಿದಂತೆಯೇ ಈ ಸಂಗತಿಗಳೆಲ್ಲಾ ಸಂಭವಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
Kannada BSI Bible 2016
ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ತನ್ನ ಹಸ್ತಕನಾದ ಸರದಾರನನ್ನು ಊರು ಬಾಗಲು ಕಾಯುವದಕ್ಕಾಗಿ ಕಳುಹಿಸಿದಲ್ಲಿ ಅವನು ಜನರಿಂದ ತುಳಿಯಲ್ಪಟ್ಟು ಸತ್ತನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
Kannada Bible (KNCL) BSI 2016
ಅರಸನು ತನ್ನ ಹಸ್ತಕನಾದ ಸರದಾರನನ್ನು ಊರ ದ್ವಾರಪಾಲಕರ ನಾಯಕನನ್ನಾಗಿ ಕಳುಹಿಸಿದ್ದನು. ಅವನು ಜನರ ತುಳಿತಕ್ಕೆ ಸಿಕ್ಕಿ ಸತ್ತನು. ಹೀಗೆ ಆ ದೈವಪುರುಷನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು.