2 Kings 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನು, “ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರು ಬಾಗಿಲಿನಲ್ಲಿರುವ ಮಾರುಕಟ್ಟೆಯ ಸ್ಥಳದಲ್ಲಿ ಮಾರಲ್ಪಡುವುದು” ಎಂದು ಮೊದಲೇ ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
Kannada BSI Bible 2016
ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅರಸನಿಗೆ - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಜವೆಗೋದಿಯು ರೂಪಾಯಿಗೆ ಇಪ್ಪತ್ತನಾಲ್ಕು ಸೇರಿನಂತೆಯೂ ಗೋದಿಹಿಟ್ಟು ಹನ್ನೆರಡು ಸೇರಿನಂತೆಯೂ ಮಾರಲ್ಪಡುವವು ಎಂದು ಹೇಳಿದಾಗ ಆ ಸರದಾರನು -
Kannada Bible (KNCL) BSI 2016
ಅವನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರಿಯ ಪಟ್ಟಣದ ಬಾಗಿಲಿನಲ್ಲಿ ಜವೆಗೋದಿ ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಮಾರಲಾಗುವುದು,” ಎಂದು ಹೇಳಿದಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.