2 Kings 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾರ್ಯದಲ್ಲಿ ಆಹಾರವು ಇಲ್ಲವೇ ಇಲ್ಲ. ನಾವು ನಗರದ ಒಳಗೆ ಹೋದರೆ, ನಾವು ಅಲ್ಲೇ ಸಾಯುತ್ತೇವೆ. ನಾವು ಇಲ್ಲೇ ಕುಳಿತಿದ್ದರೂ, ಸಾಯುವುದು ನಿಶ್ಚಿತ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ. ಅವರು ನಮ್ಮನ್ನು ಬದುಕಿಸಿದರೆ ನಾವು ಬದುಕೋಣ. ಅವರು ನಮ್ಮನ್ನು ಕೊಂದರೆ ಸಾಯೋಣ” ಎಂದು ಮಾತನಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
Kannada BSI Bible 2016
ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದೊಳಗೆ ಬರವಿರುವದರಿಂದ ಅಲ್ಲಿ ಹೋದರೂ ಸಾಯಬೇಕು. ಇಲ್ಲಿಯೇ ಕೂತಿದ್ದರೂ ಸಾಯಬೇಕು. ಆದದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವದಾದರೆ ಉಳಿಸಲಿ, ಕೊಲ್ಲುವದಾದರೆ ಕೊಲ್ಲಲಿ ಎಂದು ಮಾತಾಡಿಕೊಂಡು
Kannada Bible (KNCL) BSI 2016
ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.