2 Kings 7:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
Kannada BSI Bible 2016
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು
Kannada Bible (KNCL) BSI 2016
ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.