2 Kings 7:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಕುಷ್ಠರೋಗಿಗಳು ಪಾಳೆಯವು ಆರಂಭವಾಗಿದ್ದಲ್ಲಿಗೆ ಬಂದು, ಒಂದು ಗುಡಾರದೊಳಕ್ಕೆ ಹೋದರು. ಅವರು ಅಲ್ಲಿ ತಿಂದರು ಮತ್ತು ಕುಡಿದರು. ನಂತರ ಈ ನಾಲ್ವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಪಾಳೆಯದಿಂದ ಹೊರಗೆ ತೆಗೆದುಕೊಂಡು ಹೋದರು. ಅವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಅಡಗಿಸಿಟ್ಟರು. ನಂತರ ಅವರು ಹಿಂದಿರುಗಿ ಬಂದು, ಮತ್ತೊಂದು ಗುಡಾರವನ್ನು ಪ್ರವೇಶಿಸಿದರು. ಆ ಗುಡಾರದಿಂದಲೂ ಅವರು ವಸ್ತುಗಳನ್ನು ಕೊಂಡೊಯ್ದರು. ಅವರು ಹೊರಗೆ ಹೋಗಿ ಅವುಗಳನ್ನು ಅಡಗಿಸಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
Kannada BSI Bible 2016
ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು ಕುಡಿದು ಅದರಲ್ಲಿದ್ದ ಬೆಳ್ಳಿಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
Kannada Bible (KNCL) BSI 2016
ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.