2 Kings 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎಲೀಷನು ಹಜಾಯೇಲನಿಗೆ, “ವಾಸಿಯಾಗುವುದು’ ಎಂದು ಬೆನ್ಹದದನಿಗೆ ಹೇಳು. ಆದರೆ, ‘ಅವನು ಸಾಯುವುದು ಖಂಡಿತ’ ಎಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.
Kannada BSI Bible 2016
ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ - ಹೇಗೂ ನಿನಗೆ ವಾಸಿಯಾಗುವದು ಎಂಬದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿ
Kannada Bible (KNCL) BSI 2016
ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು.