2 Kings 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಜಾಯೇಲನು ಎಲೀಷನ ಬಳಿಯಿಂದ ಹೊರಟು ತನ್ನ ರಾಜನ ಬಳಿಗೆ ಹೋದನು. ಬೆನ್ಹದದನು ಹಜಾಯೇಲನಿಗೆ, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದನು. ಹಜಾಯೇಲನು, “ನಿನ್ನ ಕಾಯಿಲೆಯು ವಾಸಿಯಾಗುತ್ತದೆಯೆಂದು ಎಲೀಷನು ನನಗೆ ಹೇಳಿದನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, “ಎಲೀಷನು ಏನು ಹೇಳಿದನು?” ಎಂದು ಕೇಳಿದನು. ಅದಕ್ಕೆ ಇವನು, “ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು” ಎಂಬುದಾಗಿ ಉತ್ತರಕೊಟ್ಟನು.
Kannada BSI Bible 2016
ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು - ಎಲೀಷನು ಏನು ಹೇಳಿದನು ಎಂದು ಕೇಳಿದನು. ಅದಕ್ಕೆ ಇವನು - ನಿನಗೆ ಹೇಗೂ ಸ್ವಸ್ಥವಾಗುವದೆಂದು ಹೇಳಿದನು ಎಂಬದಾಗಿ ಉತ್ತರಕೊಟ್ಟನು.
Kannada Bible (KNCL) BSI 2016
ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು, “ಎಲೀಷ ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಇವನು, “ನಿಮಗೆ ಖಂಡಿತವಾಗಿ ಗುಣವಾಗುವುದೆಂದು ಹೇಳಿದರು,” ಎಂಬುದಾಗಿ ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಜಾಯೇಲನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಆಗ ಅವನು, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದ್ದಕ್ಕೆ ಹಜಾಯೇಲನು, “ನೀನು ನಿಜವಾಗಿ ಬದುಕುವೆ ಎಂದು ನನಗೆ ಹೇಳಿದನು,” ಎಂದನು.