2 Kings 8:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನನ್ನು ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.
Kannada BSI Bible 2016
ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಬೆಳಿಗ್ಗೆ ಇವನು ಕವುದಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.
Kannada Bible (KNCL) BSI 2016
ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.