2 Kings 8:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಎದೋಮ್ಯರು ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿನ ತನಕ ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ. ಅದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಳ್ವಿಕೆಯಿಂದ ಬೇರೆಯಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.
Kannada BSI Bible 2016
ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.
Kannada Bible (KNCL) BSI 2016
ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.