2 Kings 8:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋರಾಮನು ಸತ್ತುಹೋದನು. ಅವನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋರಾಮನ ಮಗನಾದ ಅಹಜ್ಯನು ನೂತನ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.
Kannada BSI Bible 2016
ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯನು ಅರಸನಾದನು.
Kannada Bible (KNCL) BSI 2016
ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋರಾಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.