2 Kings 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಜ್ಯನು ಅಹಾಬನ ಮಗನಾದ ಯೋರಾವುನ ಜೊತೆಯಲ್ಲಿ ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯುದ್ಧಮಾಡಲು ರಾಮೋತ್‌ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾವುನನ್ನು ಗಾಯಗೊಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.
Kannada BSI Bible 2016
ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಇವನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.
Kannada Bible (KNCL) BSI 2016
ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.