2 Kings 8:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಆ ಸ್ತ್ರೀಯನ್ನು ಕೇಳಿದಾಗ, ಅವಳು ತನಗೆ ಸಂಭವಿಸಿದ್ದನ್ನು ಮತ್ತು ತನಗಿದ್ದ ಇಚ್ಛೆಯನ್ನು ತಿಳಿಸಿದಳು. ಆಗ ರಾಜನು ಅವಳಿಗೆ ಸಹಾಯಮಾಡಲು ಒಬ್ಬ ಅಧಿಕಾರಿಯನ್ನು ಕರೆದು, “ಅವಳಿಗೆ ಸೇರಬೇಕಾದ ಆಸ್ತಿಯೆಲ್ಲವನ್ನೂ ಆಕೆಗೆ ಕೊಡಿಸು. ಅವಳು ದೇಶವನ್ನು ಬಿಟ್ಟಂದಿನಿಂದ ಈವರೆಗಿನ ಆಕೆಯ ಭೂಮಿಯ ಉತ್ಪಾದನೆಯನ್ನೂ ಅವಳಿಗೆ ಕೊಡಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.
Kannada BSI Bible 2016
ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಹೋಗಿ ಈಕೆಯ ಹೊಲಮನೆಗಳನ್ನೂ ಈಕೆಯು ದೇಶವನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.
Kannada Bible (KNCL) BSI 2016
ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನೇ ವಿಚಾರಿಸಿದನು. ಆಕೆ ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಹೋಗಿ ಈಕೆಯ ಹೊಲಮನೆಗಳನ್ನೂ ಈಕೆ ಈ ನಾಡನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು,” ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲೇ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಆ ಸ್ತ್ರೀಯನ್ನು ವಿಚಾರಿಸಿದಾಗ, ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ, ಅವನಿಗೆ, “ಅವಳಿಗೆ ಸೇರಿದ ಎಲ್ಲವನ್ನು, ಅವಳು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೆ ಅವಳಿಗೆ ಸಲ್ಲತಕ್ಕ ಆ ಹೊಲದ ಆದಾಯವನ್ನೆಲ್ಲಾ ಅವಳಿಗೆ ಕೊಡಿಸು,” ಎಂದನು.