2 Kings 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,
Kannada BSI Bible 2016
ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದಾನೊಂದು ಸಮಯದಲ್ಲಿ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೇವರ ಮನುಷ್ಯನು ಬಂದಿದ್ದಾನೆಂಬ ವರ್ತಮಾನವನ್ನು ಕೇಳಿ ಅವನು ಹಜಾಯೇಲನನ್ನು ಕರೆದು
Kannada Bible (KNCL) BSI 2016
ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು.