2 Kings 9:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
Kannada BSI Bible 2016
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.
Kannada Bible (KNCL) BSI 2016
ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.