2 Kings 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಹುವು ತಿರಿಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು - ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ ಎಂದು ಕೇಳಿದರು. ಅದಕ್ಕೆ ಅವನು - ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬದು ನಿಮಗೆ ಗೊತ್ತುಂಟಲ್ಲಾ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.