2 Kings 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾವುನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾವುನೂ ಇಸ್ರೇಲರೂ ಪ್ರಯತ್ನಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
Kannada BSI Bible 2016
ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನಿಂಷಿಯ ಮೊಮ್ಮಗನೂ ಯೆಹೋಶಾಫಾಟನ ಮಗನೂ ಆದ ಯೆಹುವು ಯೋರಾಮನಿಗೆ ವಿರೋಧವಾಗಿ ಒಳಸಂಚುಮಾಡಿದನು. (ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್‍ಗಿಲ್ಯಾದಿಗೆ ವಿರೋಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರ ಸಹಿತವಾಗಿ ಹೋಗಿ ಹಜಾಯೇಲನೊಡನೆ
Kannada Bible (KNCL) BSI 2016
ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.