2 Kings 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋರಾವುನು ಇಜ್ರೇಲಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದನು. ಯೇಹು ರಥದಲ್ಲಿ ಇಜ್ರೇಲಿಗೆ ಹೋದನು. ಯೆಹೂದದ ಅರಸನಾದ ಅಹಜ್ಯನೂ ಯೋರಾವುನನ್ನು ನೋಡಲು ಇಜ್ರೇಲಿಗೆ ಬಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
Kannada BSI Bible 2016
ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ರಥದಲ್ಲಿ ಕೂತು ಇಜ್ರೇಲಿಗೆ ಹೋಗುವದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು.
Kannada Bible (KNCL) BSI 2016
ಅನಂತರ ಅವನು ರಥದಲ್ಲಿ ಕುಳಿತು ಜೆಸ್ರೀಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.