2 Kings 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಜ್ರೇಲಿನ ಬುರುಜಿನಲ್ಲಿ ಒಬ್ಬ ಕಾವಲುಗಾರನು ನಿಂತಿದ್ದನು. ಅವನು ಯೇಹುವಿನ ದೊಡ್ಡಗುಂಪು ಬರುತ್ತಿರುವುದನ್ನು ನೋಡಿದನು. ಅವನು, “ನಾನು ಜನರ ದೊಡ್ಡ ಗುಂಪನ್ನು ನೋಡುತ್ತಿರುವೆನು” ಎಂದು ಹೇಳಿದನು. ಯೋರಾವುನು, “ಅವರನ್ನು ಸಂಧಿಸಲು ಯಾರನ್ನಾದರೂ ಕುದುರೆಯ ಮೇಲೆ ಕಳುಹಿಸಿ, ‘ಶುಭವಾರ್ತೆಯುಂಟೋ?’ ಎಂದು ಅವನು ಅವರನ್ನು ಕೇಳಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
Kannada BSI Bible 2016
ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು - ಜನರ ಒಂದು ಗುಂಪು ಕಾಣಿಸುತ್ತದೆ ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ - ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಎಂದು ಕೇಳುವದಕ್ಕಾಗಿ ಕಳುಹಿಸು ಎಂಬದಾಗಿ ಆಜ್ಞಾಪಿಸಿದನು.
Kannada Bible (KNCL) BSI 2016
ಜೆಸ್ರೀಲಿನ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕಾಗಿ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಜ್ರೆಯೇಲ್ ಪಟ್ಟಣದ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕೆ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.