2 Kings 9:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೋರಾವುನು ಎರಡನೆಯವನನ್ನು ಕುದುರೆಯ ಮೇಲೆ ಕಳುಹಿಸಿದನು. ಅವನು ಯೇಹುವಿನ ಗುಂಪಿನ ಬಳಿಗೆ ಬಂದು, “ರಾಜನಾದ ಯೋರಾವುನು, ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಿರುವನು” ಎಂದು ಹೇಳಿದನು. ಯೇಹುವು, “ನಮ್ಮ ಶುಭದಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
Kannada BSI Bible 2016
ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಹೋಗಿ ಯೇಹುವನ್ನು ಎದುರುಗೊಂಡು - ಅರಸನು ಶುಭವಾರ್ತೆಯುಂಟೋ ಎಂದು ಕೇಳುತ್ತಾನೆ ಅನ್ನಲು ಅವನು - ಶುಭವಾರ್ತೆ ನಿನಗೇನು? ನನ್ನ ಹಿಂದೆ ಬಾ ಎಂದನು.
Kannada Bible (KNCL) BSI 2016
ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು?, ನನ್ನ ಹಿಂದೆ ಬಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.