2 Kings 9:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾವುನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾವುನ ಹೃದಯವನ್ನು ಛೇದಿಸಿತು. ಯೋರಾವುನು ತನ್ನ ರಥದಲ್ಲಿಯೇ ಸತ್ತುಬಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.
Kannada BSI Bible 2016
ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು.
Kannada Bible (KNCL) BSI 2016
ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.