2 Kings 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾವುನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾವುನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
Kannada BSI Bible 2016
ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ - ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿವಸ ನಾವಿಬ್ಬರೂ ಕುದುರೆಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ ಯೆಹೋವನು ಅಹಾಬನಿಗೆ -
Kannada Bible (KNCL) BSI 2016
ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಹುವು ತನ್ನ ಅಧಿಪತಿಯಾದ ಬಿದ್ಕಾರನಿಗೆ, “ನೀನು ಅವನನ್ನು ತೆಗೆದುಕೊಂಡುಹೋಗಿ ಇಜ್ರೆಯೇಲಿನವನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ಏಕೆಂದರೆ ನಾನೂ, ನೀನೂ ಅವನ ತಂದೆಯಾದ ಅಹಾಬನ ಹಿಂದೆ ರಥವನ್ನು ಏರಿಕೊಂಡು ಹೋಗುತ್ತಿರುವಾಗ, ಯೆಹೋವ ದೇವರು ಈ ಪ್ರವಾದನೆಯನ್ನು ಅವನ ಬಗ್ಗೆ ತಿಳಿಸಿದರೆಂದು ಜ್ಞಾಪಕಮಾಡಿಕೋ.