2 Kings 9:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.
Kannada BSI Bible 2016
ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು ಕಣ್ಣಿಗೆ ಕಾಡಿಗೆಹಚ್ಚಿಕೊಂಡು ಕಿಟಕಿಯಿಂದ ನೋಡುತ್ತಾ ನಿಂತಳು.
Kannada Bible (KNCL) BSI 2016
ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.