2 Kings 9:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
Kannada BSI Bible 2016
ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.
Kannada Bible (KNCL) BSI 2016
ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.