2 Kings 9:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನೆಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
Kannada BSI Bible 2016
ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ - ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದು ಬಿಡುವವು;
Kannada Bible (KNCL) BSI 2016
ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.