2 Kings 9:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.
Kannada BSI Bible 2016
ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯ ಶವವು ಆ ಹೊಲಕ್ಕೆ ಗೊಬ್ಬರವಾಗುವದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವದು ಎಂಬದಾಗಿ ಯೆಹೋವನು ತಿಷ್ಬೀಯನೂ ತನ್ನ ಸೇವಕನೂ ಆದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು ಅಂದನು.
Kannada Bible (KNCL) BSI 2016
ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.