2 Kings 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, “ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ” ಎಂದು ಹೇಳಿದನು. ಯೇಹುವು, “ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?” ಎಂದು ಕೇಳಿದನು. ಆ ತರುಣನು, “ಸಂದೇಶವು ಸೇನಾಧಿಪತಿಯಾದ ನಿನಗೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.
Kannada BSI Bible 2016
ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆಯಲ್ಲಿ ಕೂಡಿರುವದನ್ನು ಕಂಡು ಅವರನ್ನು ಸಮೀಪಿಸಿ - ಸೇನಾಪತಿಯೇ, ನಿನಗೊಂದು ಮಾತು ಹೇಳುವದದೆ ಅಂದನು. ಯೇಹುವು ಅವನನ್ನು - ನಮ್ಮಲ್ಲಿ ಯಾರಿಗೆ ಎಂದು ಕೇಳಲು ಅವನು - ಸೇನಾಪತಿಯಾದ ನಿನಗೇ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆಯಲ್ಲಿ ಕೂಡಿರುವುದನ್ನು ಕಂಡು, ಅವರನ್ನು ಸಮೀಪಿಸಿ, “ಸೇನಾಪತಿಯೇ, ನಿಮಗೊಂದು ಮಾತು ಹೇಳಬೇಕಾಗಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಸೇನಾಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಲ್ಲಿ ಸೇರಿದಾಗ, ಅಲ್ಲಿ ಯೇಹುವು ಮತ್ತು ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು, “ಅಧಿಪತಿಯೇ, ನಿನಗೊಂದು ಮಾತು ಹೇಳುವುದಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಅಧಿಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.