2 Kings 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ಆ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುವನು: ‘ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
Kannada BSI Bible 2016
ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು - ಇಸ್ರಾಯೇಲ್‍ದೇವರಾದ ಯೆಹೋವನ ಮಾತನ್ನು ಕೇಳು - ಆತನು ನಿನಗೆ - ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆ.
Kannada Bible (KNCL) BSI 2016
ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು, ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತನ್ನು ಕೇಳು; ಅವರು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.