2 Kings 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
Kannada BSI Bible 2016
ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವದು.
Kannada Bible (KNCL) BSI 2016
ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.